ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ಗಾಜನೂರು ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಅಣೆಕಟ್ಟೆಯಿಂದ ತುಂಗಾನದಿಗೆ 1500 ಕ್ಯೂಸೆಕ್ಸ್ ನೀರು ಹರಿಸಲಾಗಿದೆ.
ಇಂದು ಮುಂಜಾನೆ 21 ಗೇಟ್‌ಗಳನ್ನು ಒಂದು ಇಂಚು ಮೇಲೆತ್ತಿ ನೀರು ಹರಿಸಲಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
588.22ಮೀ ಪ್ರಮಾಣದ ಅಣೆಕಟ್ಟೆಗೆ 3784 ಕ್ಯೂಸೆಕ್ಸ್ ಒಳಹರಿವಿದ್ದು, 1500 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದೆ. ಕಳೆದ ಮೂರು ದಿನಗಳಿಂದ ತೀರ್ಥಹಳ್ಳಿ ಭಾಗದಲ್ಲಿ ಸತತವಾಗಿ ಮಳೆಯಾಗುತ್ತಿರುವ ಕಾರಣ ಅಣೆಕಟ್ಟೆಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಇನ್ನು ಮೂರು-ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post