ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಬಾರ್ ಬೆಂಡ್ ಮತ್ತು ಪೈಂಟರ್ ಕೆಲಸ ನಿರ್ವಹಿಸುವವರಿಗೆ ಕಾರ್ಮಿಕ ಇಲಾಖೆಯಿಂದ ನೀಡಲಾಗುವ ವೃತಿ ಕೌಶಲ್ಯಗಳಿಗೆ ಅಗತ್ಯವಿರುವ ಪರಿಕರಗಳನ್ನೊಳಗೊಂಡ ಟೂಲ್ ಕಿಟ್‌ಗಳನ್ನು ಶಾಸಕ ಬಿ.ಕೆ ಸಂಗಮೇಶ್ವರ್ ತಮ್ಮ ಗೃಹ ಕಛೇರಿಯಲ್ಲಿ ವಿತರಿಸಿದರು.
ಕಾರ್ಮಿಕರಿಗೆ ಸರ್ಕಾರ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದು, ಅಸಂಘಟಿತ ಕಾರ್ಮಿಕರ ವಲಯದ ವ್ಯಾಪ್ತಿಯಲ್ಲಿ ಬರುವ ಬಾರ್ ಬೆಂಡ್ ಮತ್ತು ಪೈಂಟರ್ ಕೆಲಸ ಮಾಡುವವರಿಗೆ ಅವರ ವೃತ್ತಿ ಕೌಶಲ್ಯಗಳಿಗೆ ನೆರವಾಗುವಂತೆ ಅಗತ್ಯ ಪರಿಕರಗಳನ್ನು ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ವಿತರಿಸುವ ಮೂಲಕ ಕಾರ್ಮಿಕರ ಮನೋಬಲ ಹೆಚ್ಚಿಸಿದೆ.
ಕರ್ನಾಟಕ ಸ್ಟೇಟ್ ಕನ್‌ಸ್ಟ್ರಕ್ಷನ್ ವರ್ಕರ್‍ಸ್ ಸೆಂಟ್ರಲ್ ಯೂನಿಯನ್ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು, ಕಾರ್ಮಿಕ ನಿರೀಕ್ಷಕಿ ಮಮತಾಜ್ ಬೇಗಂ, ಜಿಲ್ಲಾ ಉಪಾಧ್ಯಕ್ಷ ಚಂದ್ರು, ತಾಲೂಕು ಕಾರ್ಯದರ್ಶಿ ಅಭಿಲಾಷ್, ಸಂಘಟನಾ ಕಾರ್ಯದರ್ಶಿ ಸುಬ್ಬಣ್ಣ, ಶಂಕರ್ ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post