ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ದುರ್ಗಿಗುಡಿಯಲ್ಲಿ ಈವರೆಗೂ ಕಾರ್ಯನಿರ್ವಹಿಸುತ್ತಿದ್ದ ಐಲೆಟ್ಸ್ ಡಯಾಬಿಟಿಕ್ ಸೆಂಟರ್ ಅತಿ ಶೀಘ್ರದಲ್ಲೇ ಸಾಗರ ರಸ್ತೆಗೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಐಲೆಟ್ಸ್ ಡಯಾಬಿಟಿಕ್ ಆಸ್ಪತ್ರೆಯಾಗಿ ಸ್ಥಳಾಂತರಗೊಳ್ಳಲಿದೆ.
ಸಾಗರ ರಸ್ತೆಯಲ್ಲಿರುವ ದ್ವಾರಕ ಕನ್ವೆಂನ್ಷನ್ ಹಾಲ್ ಪಕ್ಕದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕಟ್ಟಡದಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಸಾರ್ವಜನಿಕರ ಸೇವೆಗೆ ಸಿದ್ದವಾಗಿದ್ದು, ಇದು ಶೀಘ್ರದಲ್ಲಿ ಕಾರ್ಯಾರಂಭ ಮಾಡಲಿದೆ.
ಏನೆಲ್ಲಾ ಸೌಲಭ್ಯಗಳಿವೆ?
ಐಲೆಟ್ಸ್ ಡಯಾಬಿಟಿಕ್ ಆಸ್ಪತ್ರೆಯಲ್ಲಿ ಜನರಲ್ ಮೆಡಿಸನ್, ಸುಸಜ್ಜಿತ ಮಧುಮೇಹ ವಿಭಾಗ, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ, ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗ, ಮಕ್ಕಳ ವಿಭಾಗ, ಶಸ್ತ್ರಚಿಕಿತ್ಸಾ ವಿಭಾಗ, ಹೆರಿಗೆ ವಿಭಾಗ, ಸುಸಜ್ಜಿತ ಶಸ್ತ್ರಚಿಕಿತ್ಸಾ ಕೊಠಡಿ, ಲಾಪ್ರೊಸ್ಕೋಪಿಕ್ ಸರ್ಜರಿ, ಪ್ರಯೋಗಾಲಯ, ಅಲ್ಟ್ರಾಸೌಂಡ್, ಎಕೋ/ಟಿಎಂಟಿ, ಸುಸಜ್ಜಿತ ಔಷಧಾಲಯ, ಎಕ್ಸ್ ರೇ, ಎಂಡೋಸ್ಕೋಪಿ ಸೇರಿದಂತೆ ವಿವಿಧ ರೀತಿಯ ಅತ್ಯಾಧುನಿಕ ಸೌಲಭ್ಯಗಳು ಇಲ್ಲಿ ದೊರೆಯಲಿವೆ.
ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಪ್ರಮೋದ್ – 9845157022ಗೆ ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post