ಕಲ್ಪ ಮೀಡಿಯಾ ಹೌಸ್
ಹೊನ್ನಾವರ: ತಾಲ್ಲೂಕಿನಲ್ಲಿ ಸುರಿದ ಭಾರಿ ಮಳೆಯಿಂದ ಗುಂಡಬಾಳ ನದಿಯು ಪ್ರವಾಹಕ್ಕೆ ತುತ್ತಾಗಿದ್ದು, ಮಾವಿನಕುರ್ವಾ ಹೋಬಳಿಯ ಚಿಕ್ಕನಕೋಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಂಡಿಬೈಲ್ ನಂಬರ್ 2 ರಲ್ಲಿ ಕಾಳಜಿ ಕೇಂದ್ರವನ್ನು ಸ್ಥಾಪಿಸಲಾಗಿದೆ.
ನದಿ ತೀರ ಪ್ರದೇಶದ ಅಪಾಯದ ಅಂಚಿನಲ್ಲಿರುವ ಐವರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದ್ದು, ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ತಹಶಿಲ್ದಾರ್ ವಿವೇಕ ಶೇಣ್ವಿ ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post