ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿಗೆ ಮಂಜೂರಾಗಿರುವ ವಾಹನಗಳನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಆಯಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಿಗೆ ಹಸ್ತಾಂತರಿಸುವ ಮೂಲಕ ಸೇವೆಗೆ ಸಮರ್ಪಿಸಿದರು.
ತಾಲೂಕಿನಲ್ಲಿರುವ ಒಟ್ಟು 41 ಗ್ರಾಮ ಪಂಚಾಯಿತಿಗಳಿಗೂ ತಲಾ ಒಂದೊಂದು ವಾಹನ ಮೀಸಲಿಡಲಾಗಿದ್ದು, ಸದ್ಯಕ್ಕೆ 7 ಗ್ರಾಮ ಪಂಚಾಯಿತಿಗಳಿಗೆ ವಾಹನಗಳು ಬಂದಿದ್ದು, ಉಳಿದ ವಾಹನಗಳು ಸಹ ಶೀಘ್ರದಲ್ಲಿಯೇ ಬರಲಿವೆ.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಹಾಗು ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post