ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ, ನಗರಸಭೆ ಸದಸ್ಯ ಬಿ.ಕೆ ಮೋಹನ್‌ರವರ 60ನೇ ಹುಟ್ಟುಹಬ್ಬದ ಅಂಗವಾಗಿ ಜನ್ನಾಪುರ ಜಯಶ್ರೀ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಹುಟ್ಟುಹಬ್ಬಕ್ಕೆ ಶುಭಕೋರಿದ ಯುವ ಕಾಂಗ್ರೆಸ್ ಮುಖಂಡರು, ಗ್ರಾಮಾಂತರ ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಸಹಕಾರ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ಅಫ್ತಾಬ್ ಅಹಮದ್, ಉಪಾಧ್ಯಕ್ಷರಾದ ಪ್ರವೀಣ್ ಕಲ್ಪನಹಳ್ಳಿ, ತಬ್ರೆಜ್ ಖಾನ್, ನಗರಸಭೆ ಸದಸ್ಯ ಬಿ.ಎಂ ಮಂಜುನಾಥ್, ಯುವ ಮುಖಂಡ ಬಿ.ಎಸ್ ಗಣೇಶ್, ಕೆ.ಎನ್ ನಾಗೇಶ್, ಸಜ್ಜಾದ್, ಫೈಸಲ್, ಅಭಿ, ಸಮೀರ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post