ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಸಾಮಾಜಿಕ ಪರಿವರ್ತನೆ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಉನ್ನತ ಶಿಕ್ಷಣ ನೆರವಾಗಲಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಬೊಮ್ಮನಕಟ್ಟೆ ಸರ್‌ಎಂವಿ ವಿಜ್ಞಾನ ಕಾಲೇಜು ಹಾಗೂ ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯ ಸರ್ಕಾರ ಶಿಕ್ಷಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದು, ಇವುಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಉನ್ನತ ಶಿಕ್ಷಣದಲ್ಲಿ ತಾಂತ್ರಿಕ ನೈಪುಣ್ಯತೆ ಹೊಂದಬೇಕು. ಕಂಪ್ಯೂಟರ್, ಲ್ಯಾಪ್‌ಟಾಪ್ ಮತ್ತು ಟ್ಯಾಬ್‌ಗಳನ್ನು ಜ್ಞಾನ ಸಂಪಾದನೆಗೆ ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು.
ಶಿಕ್ಷಕರು ತಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸಬೇಕು. ಬೋಧನೆ ಜೊತೆಗೆ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಬೇಕು. ಸಮಾಜದ ಸ್ವಾಸ್ಥ್ಯ ಕಾಪಾಡಬೇಕೆಂದು ಕರೆ ನೀಡಿದರು.
ಪ್ರಾಂಶುಪಾಲ ಡಾ. ರವೀಂದ್ರ ಹಾಗು ಕಾಲೇಜಿನ ಉಪನ್ಯಾಸಕ ಮತ್ತು ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಡಾ. ಬಿ.ಜಿ ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಡಾ. ಎಂ.ಜಿ ಉಮಾಶಂಕರ್ ಸ್ವಾಗತಿಸಿದರು. ಸಹಾಯಕ ಉಪನ್ಯಾಸಕ ಡಾ. ವರದರಾಜು ನಿರೂಪಿಸಿದರು. ಪ್ರಾಂಶುಪಾಲ ಡಾ. ವಿಷ್ಣುಮೂರ್ತಿ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post