ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಡಿ.ಹೆಚ್. ಶಂಕರಮೂರ್ತಿ ಮತ್ತು ಬಿ.ಎಸ್. ಸುಬ್ಬಣ್ಣರಂತೆ ಅನೇಕ ಹೋರಾಟಗಾರರು ಸೆರೆವಾಸ ಅನುಭವಿಸಬೇಕಾಯಿತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಇಂದು ನಡೆದ ತುರ್ತು ಪರಿಸ್ಥಿತಿಯ ಕರಾಳ ನೆನಪು ಜನಾಕ್ರೋಶ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಂಕರಮೂರ್ತಿ ಮತ್ತು ಸುಬ್ಬಣ್ಣ ಸೆರೆವಾಸದಲ್ಲಿರುವಾಗಲೇ ಅವರ ತಂದೆ ದೈವಾಧೀನರಾದರು. ಆ ಸಮಯದಲ್ಲಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲೂ ಅನುಮತಿ ಸಹ ಸಿಗದೆ, ಕೊನೆಯ ದರ್ಶನ ಕೂಡ ಇಲ್ಲದಂತಾಯಿತು. ಈರೀತಿ ಅನೇಕ ಸಂಕಷ್ಟಗಳನ್ನು ಎದುರಿಸಬೇಕಾಯಿತು ಎಂದರು.
ಪತ್ರಿಕಾ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ ಇರಲಿಲ್ಲ. ಒಂದೇ ಮಾತರಂ, ಭಾರತ ಮಾತಾ ಕೀ ಜೈ ಎಂದು ಘೋಷಣೆ ಕೂಗಿದರೂ ಸಹ ಅದು ದೇಶ ದ್ರೋಹಿ ಘೋಷಣೆ ಎಂದು ಜೈಲಿಗೆ ಎಳೆದೊಯ್ಯಲಾಗುತ್ತಿತ್ತು. ಪತ್ರಿಕೆಗಳಲ್ಲಿ ತಮಗೆ ಬೇಕಾದ ಒಂದು ಸ್ವಂತ ವಾಕ್ಯವನ್ನೂ ಬರೆಯುವ ಹಾಗಿರಲಿಲ್ಲ. ಎಂದು ಅಂದಿನ ಕಷ್ಟದ ದಿನಗಳನ್ನು ನೆನಪು ಮಾಡಿಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post