ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಹಾಗು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ 41ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಇಂದು ಉಳ್ಳಿ ಫೌಂಡೇಶನ್ ವತಿಯಿಂದ ಕಾಗಿನಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪುರಸಭಾ ಸದಸ್ಯ ಹಾಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಳ್ಳಿ ದರ್ಶನ್, ಈ ಮಹಾಮಾರಿ ಕೊರೋನಾ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಸೋಂಕಿತರ ಜೊತೆ ನೇರ ಸಂಪರ್ಕ ಹೊಂದುವ ಮೂಲಕ ತಳ ಮಟ್ಟದಿಂದ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ ಅವರ ಕಾರ್ಯಕ್ಕೆ ಬೆಲೆ ಕಟ್ಟಲಾಗದು. ಆದರೆ, ಅವರಿಗೆ ಸರ್ಕಾರ ಮೂರು ತಿಂಗಳ ಸಂಬಳ ನೀಡದಿರುವುದು ದುರಾದೃಷ್ಟಕರ ಸರ್ಕಾರ ಕೂಡಲೇ ಸಂಬಳ ಬಿಡುಗಡೆಗೊಳಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ದಯಾನಂದ, ಗಜೇಂದ್ರ, ದರ್ಶನ್, ಶಶಾಂಕ್, ಮಾಲತೇಶ್ ಹಾಗು ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post