ಕಲ್ಪ ಮೀಡಿಯಾ ಹೌಸ್
ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಂಪನಿಯ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ವೈದ್ಯಕೀಯ ಆಮ್ಲಜನಕ ಘಟಕವನ್ನು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಅವರು ಇಂದು ಉದ್ಘಾಟಿಸಿದರು.
ದಾವಣಗೆರೆ ಸಂಸದ ಜಿ.ಎಮ್. ಸಿದ್ದೇಶ್ವರ, ಕೆ ಎಸ್ ಡಿ ಎಲ್ ಅಧ್ಯಕ್ಷರು ಹಾಗೂ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಮಾಯಕೊಂಡ ಶಾಸಕ ಎಸ್.ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ, ಕೆ.ಎಸ್.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಿ ಶಿರೂರು, ಜಿಲ್ಲಾ ಪಂಚಾಯತ ಸಿಇಒ ವಿಜಯ ಮಹಾಂತೇಶ್ ದಾನಮ್ಮನವರ್, ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ.ರಿಷ್ಯಂತ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post