ಕಲ್ಪ ಮೀಡಿಯಾ ಹೌಸ್
ದಾವಣಗೆರೆ: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಅವರು ಇಂದು ಬೆಳಿಗ್ಗೆ ದಾವಣಗೆರೆ ನಗರ ಪ್ರದೇಶಗಳಲ್ಲಿ ಸಂಚಾರ ಮಾಡಿ, ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ವೀಕ್ಷಣೆ ನಡೆಸಿದರು.
ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ, ಖಾಸಗಿ ಬಸ್ ನಿಲ್ದಾಣ ಮತ್ತು ಕುಂದವಾಡ ಕೆರೆ ಬಳಿ ನಿರ್ಮಾಣವಾಗುತ್ತಿರುವ ವಿದ್ಯುತ್ ಚಿತಾಗಾರ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.
ಸಂಸದ ಜಿ.ಎಮ್. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ, ದಾವಣಗೆರೆ ನಗರಾಭಿವೃದ್ಧಿ ಪ್ರಾಣಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ದಾವಣಗೆರೆ ಮೇಯರ್, ಸದಸ್ಯರು, ಪಾಲಿಕೆ ಆಯುಕ್ತರು, ಸ್ಮಾರ್ಟ್ ಸಿಟಿ ಎಂ.ಡಿ ಸೇರಿದಂತೆ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post