ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ಮಾಡುತ್ತಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನಲ್ಲಿ ವರದಿಯಾಗಿದೆ.
ಸಾಗರ ತಾಲೂಕಿನ ಕೆಳದಿ ಗ್ರಾಮದಲ್ಲಿ 22 ವರ್ಷದ ಯುವಕ ಗ್ರಾಮದ ನಿವಾಸಿ ಸುಬ್ರಹ್ಮಣ್ಯ ರವರ ಪುತ್ರ
ಗಣೇಶ್ (22) ಆತ್ಮಹತ್ಯೆ ಮಾಡಿಕೊಂಡಿರುವ ಯುವಕನಾಗಿದ್ದಾನೆ.
ಐ ಆಮ್ ರೆಸ್ಪಾನ್ಸಿಬಲ್ ಫಾರ್ ಮೈ ಡೆತ್ ಎಂದು ಪತ್ರ ಬರೆದು ಗಣೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಯುವಕ ಉಡುಪಿಯಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಿಕೊಂಡುತ್ತಿದ್ದ ಎನ್ನಲಾಗಿದ್ದು, ಲಾಕ್ ಡೌನ್ ನಿಂದ ಕಾಲೇಜು ರಜೆ ಇದ್ದ ಕಾರಣ ಸ್ವಗ್ರಾಮಕ್ಕೆ ಮರಳಿದ.
ಈ ಪ್ರಕರಣ ಸಾಗರ ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post