ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ನಗರದ 110ಕ್ಕೂ ಹೆಚ್ಚು ಹೆಚ್ಐವಿ ಸೋಂಕಿತರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ರವರ ನೇತೃತ್ವದಲ್ಲಿ ರೇಷನ್ ಕಿಟ್ ಗಳನ್ನುವಿತರಿಸಲಾಯಿತು
ನಂತರ ಮಾತನಾಡಿದ ಅವರು, ಈಗಾಗಲೇ ಯುವ ಕಾಂಗ್ರೆಸ್ ರಾಜ್ಯಾದ್ಯಂತ ಸಂಕಷ್ಟದಲ್ಲಿರುವ ಶ್ರೀಸಾಮಾನ್ಯನಿಗೆ ನೆರವಿನ ಕಾರ್ಯಗಳನ್ನು ಮಾಡುತ್ತಿದ್ದು, ರಾಜ್ಯ ಸರ್ಕಾರ ಅವೈಜ್ಞಾನಿಕ ಲಾಕ್ ಡೌನ್ ಘೋಷಿಸಿ ಬೇಕಾಬಿಟ್ಟಿ ಪ್ಯಾಕೇಜುಗಳನ್ನು ನೀಡಿದ್ದು, ಕೂಡಲೇ ಎಲ್ಲಾ ಸ್ತರ ವರ್ಗದ ಹಾಗೂ ಇಂತಹ ಸೋಂಕಿತರಿಗೆ ವಿಶೇಷ ಪ್ಯಾಕೇಜನ್ನು ಘೋಷಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಆರ್ ಕಿರಣ್ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮಾರೇಶ್ , ಪದಾಧಿಕಾರಿಗಳಾದ ಅರುಣ್ ನವುಲೆ, ಗಗನ್ ಗೌಡ, ಇರ್ಫಾನ್, ವೆಂಕಟೇಶ್ ಕಲ್ಲೂರು, ರಾಹುಲ್, ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post