ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಸಂಸದ ಬಿ. ವೈ. ರಾಘವೇಂದ್ರ ನೇತೃತ್ವದಲ್ಲಿ ಸೇವಾ ಭಾರತಿ ಮತ್ತು ಪ್ರೇರಣಾ ಟ್ರಸ್ಟ್ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋವಿಡ್ ಲಸಿಕಾಕರಣ ಕಾರ್ಯಕ್ರಮ ನಡೆಯಿತು.
ಸಿಂಡಿಕೇಟ್ ಸದಸ್ಯರಾದ ಧರ್ಮಪ್ರಸಾದ್, ರಾಜ್ಯ ನಿರ್ದೇಶಕರಾದ ಮಂಗೋಟೆ ರುದ್ರೇಶ್, ಟಿಎಚ್‌ಒ ಅಶೋಕ್ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.
ನಗರದ ಸರ್ ಎಂ. ವಿಶ್ವೇಶ್ವರಯ್ಯ ಸರ್ಕಾರಿ ಆರ್ಟ್ಸ್ ಅಂಡ್ ಕಾಮರ್ಸ್ ಕಾಲೇಜಿನಲ್ಲಿ ಇಂದು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಲಸಿಕೆ ನೀಡಲಾಯಿತು.
ಈಗಾಗಲೇ ಸಂಸದ ಬಿ. ವೈ. ರಾಘವೇಂದ್ರ ಇವರು ತಮ್ಮ ಸ್ವಯಂ ಸೇವಾ ಸಂಸ್ಥೆ ಪ್ರೇರಣಾ ಟ್ರಸ್ಟ್ ಮತ್ತು ಸೇವಾ ಭಾರತಿ ವತಿಯಿಂದ 2000 ಡೋಸ್ ಲಸಿಕೆಯನ್ನು ಭದ್ರಾವತಿಗೆ ಕಳಿಸಿದ್ದು, ಜಿಲ್ಲೆಯ ಎಲ್ಲಾ ಕಾಲೇಜುಗಳಿಗೆ ಉಚಿತ ಲಸಿಕೆ ವಿತರಿಸಿದ್ದಾರೆ. ಇಂದು ಸರ್ ಎಂ. ವಿ. ಆರ್ಟ್ಸ್ ಅಂಡ್ ಕಾಮರ್ಸ್ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post