ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಡಿಆರ್‌ಡಿಒ ಮಾಜಿ ವಿಜ್ಞಾನಿ, ಹೆಚ್‌ಎಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್ ಸುಧೀಂದ್ರ ಹಾಲ್ದೊಡ್ಡೇರಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.
ವಾರದ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸುಧಾರಣೆ ಕಷ್ಟವಿದೆ ಎಂದು ವೈದ್ಯರು ಮಾಹಿತಿ ನೀಡಿದ್ದರು.
ಸುಧೀಂದ್ರ ಹಾಲ್ದೊಡ್ಡೇರಿ ಅವರ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಸ್ಥಗಿತಗೊಂಡಿದ್ದರಿಂದ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ದೇಹದಾನಕ್ಕೆ ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















