ಕಲ್ಪ ಮೀಡಿಯಾ ಹೌಸ್
ಮಂಡ್ಯ: ಮದುವೆಯಾಗಿ ಬೇರೆ ಬೇರೆ ಮನೆಗೆ ತೆರಳಬೇಕು ಎಂಬ ಕಾರಣಕ್ಕೆ ಮನನೊಂದ ಅವಳಿ ಸಹೋದರಿಯರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ತಾಲೂಕಿನ ಹುಣಸನಹಳ್ಳಿ ಗ್ರಾಮದ ಸುರೇಶ್ ಮತ್ತು ಯಶೋಧ ದಂಪತಿ ಪುತ್ರಿಯರಾದ ದೀಪಿಕಾ (೧೯), ದಿವ್ಯ(೧೯) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು.

ದಿವ್ಯ ಹಾಗೂ ದೀಪಿಕಾ ಅವಳಿ ಸಹೋದರಿಯರಾಗಿದ್ದು, ಬಾಲ್ಯದಿಂದಲೂ ಬಹಳ ಅನ್ಯೋನ್ಯತೆಯಿಂದ ಇದ್ದರು. ಇದೀಗ ಪೋಷಕರು ತಮ್ಮ ಅವಳಿ ಹೆಣ್ಣು ಮಕ್ಕಳಿಗೆ ಮದುವೆ ನಿಶ್ವಯಿಸಿ, ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ.
ಮದುವೆಯಾಗಿ ಬೇರೆ ಬೇರೆ ಮನೆಗೆ ತೆರಳಿದ ನಂತರ ತಮ್ಮ ಬಾಂಧವ್ಯ ಕೊನೆಯಾಗುತ್ತದೆ ಎಂದು ನಿರ್ಧರಿಸಿ, ಸಂಜೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















