ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ರಾಜ್ಯ ಸರ್ಕಾರಿ ನೌಕರರ ಸಂಘ ಭದ್ರಾವತಿ ಶಾಖೆ ಮತ್ತು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಜ್ಯುವೆಲರಿ ವತಿಯಿಂದ ಕೋವಿಡ್ನಿಂದಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಶಾಸಕ ಬಿ.ಕೆ. ಸಂಗಮೇಶ್ವರ್ ದಿನಸಿ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಿದ್ಧಬಸಪ್ಪ ಅವರ ನೇತೃತ್ವದಲ್ಲಿ ತಾಲೂಕು ನೌಕರರ ಸಂಘವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಇಂತಹ ಮಾದರಿ ಕೆಲಸಗಳು ಇದೇರೀತಿ ಮುಂದುವರೆಯಲಿ. ಇದಕ್ಕೆ ಸದಾ ತಮ್ಮ ಸಂಪೂರ್ಣ ಬೆಂಬಲವಿರುತ್ತದೆ ಎಂದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ಧಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಎ.ಜೆ. ರಂಗನಾಥಪ್ರಸಾದ್, ಖಜಾಂಚಿ ಡಿ.ಎಸ್. ರಾಜಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ಬಸವರಾಜ್ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post