ಕಲ್ಪ ಮೀಡಿಯಾ ಹೌಸ್
ಸಾಗರ: ಮೂಲಭೂತ ಸೌಕರ್ಯಾಭಿವೃದ್ದಿ ಇಲಾಖೆ ಕಾರ್ಯದರ್ಶಿ ಅವರನ್ನು ಶಾಸಕ ಹೆಚ್.ಹಾಲಪ್ಪ ಭೇಟಿಯಾಗಿ, ಸಾಗರ-ಹೊಸನಗರ ತಾ. ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡುವಂತೆ ಚರ್ಚಿಸಿದರು.
ನೆಟ್ ವರ್ಕ್ ಸಮಸ್ಯೆಯಿಂದ ಆನ್ ಲೈನ್ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ, ಹಾಗೂ ಮನೆಯಿಂದ ಕಚೇರಿ ಕರ್ತವ್ಯ ನಿರ್ವಹಿಸುತ್ತಿರುವವವರಿಗೆ, ಸರ್ಕಾರಿ ಕಛೇರಿ ಕೆಲಸಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಈ ಹಿಂದೆ ಸದನದಲ್ಲಿ ಪ್ರಸ್ತಾಪಿಸಲಾಗಿತ್ತು, ಅದರೇ ಇಲ್ಲಿಯವರೆಗೂ ಸಮಸ್ಯೆಗೆ ಯಾವುದೇ ಪರಿಹಾರ ದೊರತಿಲ್ಲ. ಆದುದರಿಂದ ಸದರಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಸಹಭಾಗಿತ್ವದಲ್ಲಿ (Cost Sharing ಮೂಲಕ) ಮೊಬೈಲ್ ಟವರ್ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಲಾಯಿತು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















