ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಮಂವಿಸಕಂ ನಗರ ಉಪವಿಭಾಗ, ಭದ್ರಾವತಿಯ ಘಟಕ-2ರ ಶಾಖಾ ವ್ಯಾಪ್ತಿಯಲ್ಲಿ ಹಳೆಯ ವಿದ್ಯುತ್ ತಂತಿಯನ್ನು ಹೊಸ ವಿದ್ಯುತ್ ತಂತಿಯಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜುಲೈ 12ರ ಸೋಮವಾರ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಶ್ರೀಶಂಕರಮಠ, ಸಿಲ್ವರ್ ಪಾಕ್ ಬಡಾವಣೆ, ಬಸವೇಶ್ವರ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಂವಿಸಕಂ ಭದ್ರಾವತಿ ನಗರ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post