ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಚಿತ್ರನಟರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಇಂದು ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ
ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ಫುಡ್ ಕಿಟ್ ವಿತರಿಸಿದರು.
ಲೈಟ್ ಬಾಯ್ಸ್, ಕ್ಯಾಮೆರಾಮನ್, ಮೇಕಪ್ ಕಲಾವಿದರಿಗೆ ಆಹಾರದ ಕಿಟ್ ವಿತರಿಸಿ ಬಳಿಕ ಮಾತನಾಡಿದ ಅವರು, ನಾನು ಚಿತ್ರರಂಗದಿಂದಲೇ ಬಂದವನಾದ್ದರಿಂದ ಚಿತ್ರರಂಗದಲ್ಲಿರುವ ಕಾರ್ಮಿಕರ ಕಷ್ಟದ ಅರಿವು ಅನುಭವವಿದೆ. ಕೋವಿಡ್‌ನಿಂದಾಗಿ ಎಲ್ಲರೂ ಸಂಕಷ್ಟದಲ್ಲಿದ್ದಾರೆ. ಚಿತ್ರರಂಗದ ಕೆಲವು ಗೆಳೆಯರು ನನ್ನನ್ನು ಭೇಟಿ ಮಾಡಿ ಸಹಾಯ ಕೋರಿದ್ದರು. ಅದರಂತೆ ಕಾರ್ಮಿಕ ಕಲ್ಯಾಣ ಇಲಾಖೆಗೆ ತಾನು ಮನವಿ ಮಾಡಿದ್ದು, ಅವರು ಫುಡ್ ಕಿಟ್ ಕಳುಹಿಸಿದ್ದರು. ಹೀಗಾಗಿ ಇಂದು ಒಂದು ಸಾವಿರ ಫುಡ್ ಕಿಟ್ ಹಂಚಲಾಗುತ್ತಿದೆ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post