ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ಗೋಣಿಬೀಡು ವಾಸಿ ಲಿಂಗರಾಜು (28) ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿಡುವುದೇ ಘಟನೆಗೆ ಕಾರಣ ಎನ್ನಲಾಗಿದೆ.

ಘಟನೆ ಹಿನ್ನೆಲೆ:
ಲಿಂಗರಾಜು ಅವರು ತಮ್ಮ ಕಾರಿನಲ್ಲಿ ಕೊಣಂದೂರು ಕಡೆಗೆ ಹೊರಟಿದ್ದರು. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಚ್‌ಕೆ ಜಂಕ್ಷನ್ ನಿಂದ ಉಂಬ್ಳೆಬೈಲು ಕಡೆಗೆ ಹೋಗುವ ರಸ್ತೆಯಲ್ಲಿ ಅತಿವೇಗವಾಗಿ ವಾಹನವನ್ನು ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಸಿದ್ದಾರೆ. ಪರಿಣಾಮ ಲಿಂಗರಾಜು ಅವರ ತಲೆಯ ಹಿಂಭಾಗಕ್ಕೆ ತೀವ್ರ ಸ್ವರೂಪದ ರಕ್ತಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಕಲಂ ೨೭೯, ೩೦೪(ಎ) ಐಪಿಸಿ ರೀತ್ಯಾ ಪ್ರಕರಣ ದಾಖಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















