ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಜೆಎನ್‌ಎನ್‌ಸಿ ಇಂಜಿನಿಯರಿಂಗ್ ಕಾಲೇಜಿನ ರಸಾಯನವಿಜ್ಞಾನ ವಿಭಾಗದ ವತಿಯಿಂದ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಜುಲೈ 16 ಮತ್ತು 17 ರಂದು ಸಿಇಟಿ/ಕಾಮೆಡ್-ಕೆ ಪರೀಕ್ಷೆ ಎದುರಿಸುವುದು ಹೇಗೆ? ಕುರಿತು ಶಿಕ್ಷಣ ತಜ್ಞರಿಂದ ಉಚಿತ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿದೆ.
ಎರಡು ದಿನಗಳ ಈ ಕಾರ್ಯಾಗಾರದಲ್ಲಿ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆಯಲ್ಲಿ ಎದುರಾಗಬಹುದಾದ ಗಣಿತ ವಿಜ್ಞಾನ, ಭೌತ ವಿಜ್ಞಾನ, ರಸಾಯನ ವಿಜ್ಞಾನದ ಹಲವು ವಿಚಾರಗಳ ಕುರಿತಾಗಿ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸುವ ರೀತಿಯ ಕುರಿತು ಶಿಕ್ಷಣ ತಜ್ಞರು ಮಾಹಿತಿ ನೀಡಲಿದ್ದಾರೆ. ಜೊತೆಗೆ ಅಣಕು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಹೆಚ್ಚು ಸಹಕಾರಿಯಾಗಲಿದೆ.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಶಿಕ್ಷಣ ತಜ್ಞರಾದ ಎಂ.ಆರ್. ಸೀತಾಲಕ್ಷ್ಮೀ, ರಸಾಯನವಿಜ್ಞಾನ ಪ್ರಾಧ್ಯಾಪಕರಾದ ಬಿ.ಎನ್. ವಿಶ್ವನಾಥಯ್ಯ, ಭೌತವಿಜ್ಞಾನ ಪ್ರಾಧ್ಯಾಪಕರಾದ ಎಂ.ಹಿರೇಮಠ್, ಗಣಿತವಿಜ್ಞಾನ ಪ್ರಾಧ್ಯಾಪಕರಾದ ಹೆಚ್.ಎಸ್. ಸುಧೀರ್ ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಗಳು ಮತ್ತು ಪೋಷಕರು ಕಾರ್ಯಾಗಾರದಲ್ಲಿ ಭಾಗವಹಿಸಬಹುದಾಗಿದ್ದು ಗೂಗಲ್ ಫಾರ್ಮ್ ಲಿಂಕ್ https://forms.gle/AqTgKuBkMPbFZa3P8 ಮೂಲಕ ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಪ್ರಾಂಶುಪಾಲರಾದ ಡಾ.ಪಿ. ಮಂಜುನಾಥ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post