ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ MCF-3, MCF-4 ಮತ್ತು MCF-20 ಮಾರ್ಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಪ್ರದೇಶಗಳಲ್ಲಿ ಜುಲೈ 15ರ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಕಿಯೋನಿಕ್ಸ್ ಐ.ಟಿ. ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಶಿವಮೊಗ್ಗ ಮಂವಿಸಕಂನ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















