ಕಲ್ಪ ಮೀಡಿಯಾ ಹೌಸ್
ಅಯೋಧ್ಯಾ: ಸಮಸ್ತ ಹಿಂದೂಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, 2023ರ ಡಿಸೆಂಬರ್ ವೇಳೆಗೆ ರಾಮ ಮಂದಿರಕ್ಕೆ ಭಕ್ತರಿಗೆ ಪ್ರವೇಶ ದೊರೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಇಂಜಿನಿಯರ್’ಗಳ ಜೊತೆ ನಡೆದ ಸಭೆಯ ನಂತರ ಮಾಹಿತಿ ನೀಡಿರುವ ರಾಮಮಂದಿರ ಟ್ರಸ್ಟ್ ಅಧ್ಯಕ್ಷ ನೃಪೇಂದ್ರ ಮಿಶ್ರಾ, 2023ರ ಡಿಸೆಂಬರ್ ಅಂತ್ಯಕ್ಕೆ ಭವ್ಯ ದೇವಾಲಯದಲ್ಲಿ ಪ್ರಭು ಶ್ರೀ ರಾಮಚಂದ್ರನ ದರ್ಶನ ಪಡೆಯಲು ಅವಕಾಶ ಕಲ್ಪಿಸುವ ಎಲ್ಲ ಸಾಧ್ಯತೆಗಳೂ ಇವೆ ಎಂದಿದ್ದಾರೆ.
70 ಎಕರೆ ವಿಸ್ತೀರ್ಣದಲ್ಲಿ ಶ್ರೀರಾಮ ಚಂದ್ರ ದೇವರ ಭವ್ಯ ದೇಗುಲು ಅಯೋಧ್ಯತೆಯಲ್ಲಿ ನಿರ್ಮಾಣವಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post