ಕಲ್ಪ ಮೀಡಿಯಾ ಹೌಸ್
ಮೈಸೂರು: “ಕನ್ನಡಿಗರು ನಪುಂಸಕರು” ಎಂದು ಹೇಳುವ ಮೂಲಕ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಮತ್ತೊಂದು ವಿವಾದಿತ ಹೇಳಿಕೆ ನೀಡಿ, ಸುದ್ದಿಗೆ ಗ್ರಾಸವಾಗಿದ್ದಾರೆ.
ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸಬೇಕು ಎಂದು ಆಗ್ರಹಿಸಿ. ಮೈಸೂರು ಜಿಲ್ಲಾ ಕನ್ನಡ ಹೋರಾಟಗಾರರ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರೊ. ಭಗವಾನ್ ತಮಿಳರು ಹೋರಾಡಿ ಈ ವಿಚಾರದಲ್ಲಿ ಸಫಲರಾದರು. ಆದರೆ ಕನ್ನಡಿಗರು ನಪುಂಸಕರು, ಈ ವಿಚಾರದಲ್ಲಿ ಒಗ್ಗಟ್ಟಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಮೇಕೆದಾಟು ವಿಚಾರವಾಗಿ ಕೂಡ ತಮಿಳಿಗರದ್ದೇ ಮೇಲುಗೈ ಆಗಿದೆ ಎಂದು ಅವರು ಆರೋಪಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಸಬೇಕು ಎನ್ನುವ ಬಗ್ಗೆ ಇದುವರೆಗೆ ಸಶಕ್ತ ಹೋರಾಟ ನಡೆಸುವಲ್ಲಿ ವಿಫಲವಾಗಿದ್ದಾರೆ. ಅಲ್ಲದೆ ಮೇಕೆದಾಟು ವಿಷಯದಲ್ಲಿ ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳೂ ಒಗ್ಗಟ್ಟಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಆದರೆ ನಮ್ಮಲ್ಲಿ ಆ ರೀತಿಯ ಒಗ್ಗಟ್ಟಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post