ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರು ಮಾಡುವುದಾಗಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.
ಅವರು ಇಂದು ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ, ಶಿವಮೊಗ್ಗದ ಬಹುದಿನದ ಬೇಡಿಕೆಯಂತೆ ಸುಮಾರು 50 ವಿದ್ಯಾರ್ಥಿಗಳನ್ನೊಳಗೊಂಡ ಆಗಮ ವೇದ ಪಾಠಶಾಲೆಯನ್ನು ಪ್ರಾರಂಭಿಸಲಾಗುವುದು. ಹಾಗೂ ಎಲ್ಲಾ ಐವತ್ತು ವಿದ್ಯಾರ್ಥಿಗಳಿಗೆ ವಸತಿ ಸೌಕರ್ಯದೊಂದಿಗೆ ವೇದವನ್ನು ಕಲಿಸಲಾಗುತ್ತದೆ ಎಂದು ಹೇಳಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















