ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಜನನಾಯಕ ಎಂದೇ ಮನೆಮಾತಾಗಿರುವ ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಅವರನ್ನು ರಾಜ್ಯದ ಉಪಮುಖ್ಯಮಂತ್ರಿ ಆಗಿ ಆಯ್ಕೆ ಮಾಡಲಾಗಿದೆ.

ಶ್ರೀರಾಮುಲು ಅವರಿಗೆ ಈ ಹಿಂದೆಯೇ ಹೈಕಮಾಂಡ್ ಉಪಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಎರಡು ವರ್ಷ ಆದರೂ ಅದು ಈಡೇರಿರಲಿಲ್ಲ. ಇದೀಗ ಕಾಲ ಕೂಡಿಬಂದಿದ್ದು, ಶ್ರೀರಾಮುಲು ಕನಸು ನನಸಾದಂತಾಗಿದೆ.
ಶ್ರೀರಾಮುಲು ಅವರು ಆಗಸ್ಟ್ 8, 1971 ರಂದು ಕರ್ನಾಟಕದ ಬಳ್ಳಾರಿಯಲ್ಲಿ ರೈಲ್ವೆ ಉದ್ಯೋಗಿ ಬಿ. ತಿಮ್ಮಪ್ಪ ಮತ್ತು ಗೃಹಿಣಿ ಬಿ. ಹೊನ್ನೂರಮ್ಮ ದಂಪತಿಗೆ ಜನಿಸಿದರು.
2006 ರಲ್ಲಿ ಬಿಜೆಪಿ- ಜೆಡಿಎಸ್ ಸರ್ಕಾರದಲ್ಲಿ ಪ್ರವಾಸೋದ್ಯಮ ಸಚಿವರಾಗಿದ್ದ ಇವರು ನಂತರ, ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿ ಹಾಗೂ ಸಮಾಜ ಕಲ್ಯಾಣ ಸಚಿವರಾಗಿ ಅನುಭವ ಹೊಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
	    	




 Loading ...
 Loading ... 
							



 
                
Discussion about this post