ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ವ್ಯವಹಾರ ನಿರ್ವಹಣೆ ವಿಭಾಗದ ಪ್ರಾಧ್ಯಾಪಕ ಪ್ರೊ. ಸಿ.ಎಂ. ತ್ಯಾಗರಾಜ ಅವರನ್ನು ಕುವೆಂಪು ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ)ರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಪ್ರಸ್ತುತ, ಕುವೆಂಪು ವಿಶ್ವವಿದ್ಯಾಲಯದಲ್ಲಿ ಕುಲಸಚಿವ (ಮೌಲ್ಯಮಾಪನ) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿವಿ ಇಂಗ್ಲೀಷ್ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಪಿ. ಕಣ್ಣನ್ ಅವರನ್ನು ಅಕ್ಕಮಹಾದೇವಿ ವಿವಿಯಲ್ಲಿ ಮುಂದುವರೆಯಲು ಸೂಚಿಸಲಾಗಿದೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















