ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಹಳೆ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ ಇಂದು ಜಯತೀರ್ಥರ ಆರಾಧನಾ ಮಹೋತ್ಸವ ನಡೆಯಿತು.
ಬೆಳಿಗ್ಗೆ 6 ಗಂಟೆಗೆ ನಿರ್ಮಾಲ್ಯ, ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ ಜರಗಿತು. 10 ಗಂಟೆಗೆ ಮಠದಿಂದ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ತನಕ ಪಲ್ಲಕ್ಕಿ ಉತ್ಸವ ಹಾಗೂ ಮಠದ ಪ್ರಾಕಾರದಲ್ಲಿ ರಥೋತ್ಸವ ನಡೆಯಿತು.
ಪಂಡಿತ ವೃತ್ತಿಕ ಗುರುರಾಜಚಾರ್ ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ನಂತರ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.
ಗುರುರಾಜ ಸೇವಾ ಸಮಿತಿ ಅಧ್ಯಕ್ಷರಾದ ಮುರಳಿಧರ್ ತಂತ್ರಿ ಹಾಗೂ ಉಪಾಧ್ಯಕ್ಷರಾದ ಸುಮಾ ರಾಘವೇಂದ್ರ ತಂತ್ರಿ, ಪ್ರಧಾನ ಕಾರ್ಯದರ್ಶಿ ರಮಾಕಾಂತ್, ನಿರಂಜನ್ ಆಚಾರ್ ಹಾಗೂ ಪ್ರಧಾನ ಅರ್ಚಕರಾದ ಸತ್ಯನಾರಾಯಣಾಚಾರ್, ಗೋಪಾಲಾಚಾರ್, ಶ್ರೀನಿವಾಸಾಚಾರ್, ವಿದ್ಯಾನಂದ ನಾಯಕ್ ಗಂಟೆ, ನಾರಾಯಣಾಚಾರ್ ಹಾಗೂ ಹಲವು ವಿದ್ವಾಂಸರುಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post