ಕಲ್ಪ ಮೀಡಿಯಾ ಹೌಸ್
ಉತ್ತರ ಕನ್ನಡ: ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡಲು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹುಬ್ಬಳ್ಳಿಯಿಂದ ಕಾರವಾರಕ್ಕೆ ತೆರಳುವ ಸಂದರ್ಭದಲ್ಲಿ ಮಾಜಿ ಸಚಿವ ಶಿವರಾಮ ಹೆಬ್ಬಾರ್ ಪ್ರಯಾಣಿಸುತ್ತಿದ್ದ ವಾಹನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಡೆದಿದೆ.
ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಇದ್ದ ಕಾರು ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ಶಿವರಾಮ್ ಹೆಬ್ಬಾರ್ ಹಾಗೂ ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post