No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಪ್ರತಿಯೊಬ್ಬ ಶಾಸಕರು ನಮ್ಮೊಂದಿಗೆ ಕೈಜೋಡಿಸಿದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ: ಪವಿತ್ರ ರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 1, 2021
in ದಾವಣಗೆರೆ
0
ಪ್ರತಿಯೊಬ್ಬ ಶಾಸಕರು ನಮ್ಮೊಂದಿಗೆ ಕೈಜೋಡಿಸಿದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ: ಪವಿತ್ರ ರಾಮಯ್ಯ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್

ಚನ್ನಗಿರಿ:
ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಗೆ ಸುಮಾರು 30 ಮಂದಿ ವಿಧಾನ ಸಭಾ ಸದಸ್ಯರು ಪ್ರತಿನಿಧಿಸುತ್ತಾರೆ, ಅವರೆಲ್ಲರೂ ಭದ್ರಾ ಕಾಡಾ ಪ್ರಾಧಿಕಾರಕ್ಕೆ ಪ್ರತಿವರ್ಷ 2 ಕೋಟಿಯಂತೆ ಅನುದಾನ ಒದಗಿಸಿ ಕೊಟ್ಟರೆ ಇದರಿಂದ 60ಕೋಟಿ ಅನುದಾನ ಲಭ್ಯವಾಗುತ್ತದೆ. ಈ ಅನುದಾನದಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಎದುರಿಸುತ್ತಿರುವ ನೂರಾರು ಸಮಸ್ಯೆಗಳು ಪರಿಹರಿಸುವುದರ ಜೊತೆಗೆ ಪ್ರಾಧಿಕಾರವನ್ನು  ಮಾದರಿಯಾಗಿ ಅಭಿವೃದ್ದಿ ಪಡಿಸಲು ಅನುಕೂಲವಾಗುತ್ತದೆ ಎಂದು ಭದ್ರಾ ಕಾಡಾ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರ ರಾಮಯ್ಯ ಅಭಿಪ್ರಾಯಪಟ್ಟರು.

ಚನ್ನಗಿರಿ ತಾಲ್ಲೂಕು ಕತ್ತಲಗೆರೆ ಗ್ರಾಮದಲ್ಲಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಚ್ಚುಕಟ್ಟು ವ್ಯಾಪ್ತಿಯ ಪ್ರತಿಯೊಂದು ಅಭಿವೃದ್ದಿ ಕೆಲಸಗಳು ಪ್ರಾಧಿಕಾರದ ವತಿಯಿಂದ ಮಾಡಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಶಾಸಕರು ಆಲೋಚನೆ ಮಾಡಿ ನಮ್ಮೊಂದಿಗೆ ಕೈಜೋಡಿಸಿದರೆ ರೈತರು ಎದುರಿಸುತ್ತಿರುವ ಸಾಕಷ್ಟು ಸಮಸ್ಯೆಳನ್ನುಬಗೆ ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ ಆಯಾ ಶಾಸಕರು ಒದಗಿಸಿದ ಅನುದಾನವನ್ನು ಆಯಾ ಕ್ಷೇತ್ರದ ಅಚ್ಚುಕಟ್ಟು ಅಭಿವೃದ್ದಿಗೆ ವಿನಯೋಗಿಸುತ್ತೇನೆ ಎಂದು ಭರವಸೆ ನೀಡಿದರು.

ನನ್ನ ದುರದೃಷ್ಟ ಎಂಬಂತೆ ನಾನು ಭದ್ರಾ ಕಾಡಾ ಅಧ್ಯಕ್ಷರಾಗಿ ನೇಮಕಗೊಂಡ ಸಮಯದಲ್ಲಿ  ಕೋವಿಡ್-19 ಲಗ್ಗೆಯಿಟ್ಟಿತು, ಅದನ್ನು ವ್ಯಕ್ತಿಯಿಂದ ವ್ಯಕ್ತಿಗೆ ಹರಡದಂತೆ ತುಂಡರಿಸಲು ಲಾಕ್ ಡೌನ್ ಮಾಡಬೇಕಾದ ಅನಿವಾರ್ಯತೆ ರಾಜ್ಯ ಸರ್ಕಾರಕ್ಕೆ ಎದುರಾಯಿತು. ಪರಿಣಾಮ ಎಲ್ಲಾ ರಂಗಗಳು ಮುಚ್ಚುವಾಂತಾಗಿ ಬೊಕ್ಕಸಕ್ಕೆ ಕೊಡಲಿ ಪೆಟ್ಟು ಬಿದ್ದ ಪರಿಣಾಮ ಅಭಿವೃದ್ದಿಯ ಕಾರ್ಯಗಳಿಗೆ ಅನುದಾನದ ಕೊರತೆ ಎದುರಾಗುವ ಸಂದಿಗ್ಧ ಪರಿಸ್ಥಿತಿ ನಾವೆಲ್ಲರೂ ಕಾಣಬೇಕಾಯಿತು. ಕೇವಲ ಸರ್ಕಾರ ಕೊಡುವ ಗೌರವಧನ ಪಡೆಯಲು ಕಚೇರಿಗೆ ಪ್ರತಿದಿನ ಬಂದು ಕೂರಲು ಮನಸ್ಸು ಒಪ್ಪಲಿಲ್ಲ, ಇಂತಹ ಸಮಯದಲ್ಲಿ ಸರ್ಕಾರದೊಂದಿಗೆ ನಿಲ್ಲಬೇಕು ಸರ್ಕಾರದ ಮೇಲೆ ಒತ್ತಡ ತರಬಾರದು ಎಂದು ನಿರ್ಧರಿಸಿ ಪರ್ಯಾಯ ಮಾರ್ಗದೆಡೆಗೆ ಆಲೋಚನೆ ಮಾಡಿದಾಗ ನರೇಗಾ ಅನುದಾನ ಬಳಸಿಕೊಳ್ಳುವ ಆಲೋಚನೆ ಹೊಳೆಯಿತು, ಇದರಿಂದ ಕೊನೆಯ ಭಾಗಕ್ಕೆ ನೀರು ಕೊಡಲು ಅನುಕೂಲವಾಯಿತು ಎಂದು ಹೇಳಿದರು.

ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಶಿವಮೊಗ್ಗ ನಿರ್ದೇಶಕರಾದ ನಾಗರಾಜಪ್ಪ ಮಾತನಾಡಿ, ಪವಿತ್ರ ರಾಮಯ್ಯ ಅವರು ಮೂಲತಃ ರೈತ ಸಂಘದಿಂದ ಬಂದವರು ಅವರಿಗೆ ರೈತರ ಪ್ರತಿಯೊಂದು ಸಮಸ್ಯೆಗಳ ಬಗ್ಗೆ ಅರಿವಿದೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಬರುವ ಅನುದಾನ ಒದಗಿಸಲು ಕೈಜೋಡಿಸುತ್ತೆವೆ ಒಬ್ಬ ಹೆಣ್ಣು ಮಗಳಾಗಿ ಮಾಡುತ್ತಿರುವ ಸಾಧನೆ ಎಲ್ಲರೂ ಮೆಚ್ಚುವಂತಹದ್ದು ಎಂದು ಹೇಳಿದರು, ಇದರೊಂದಿಗೆ ಈ ಸ್ಥಳದಲ್ಲಿ ಕೃಷಿ ಪದವಿ ಕಾಲೇಜು ಮಾಡಲು ಎಲ್ಲಾ ರೀತಿಯ ಅನುಕೂಲವಿದ್ದು ಸ್ಥಳೀಯ ಜನಪ್ರತಿನಿಧಿ ಗಳೊಂದಿಗೆ ಮಾತನಾಡಿ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ರೈತ ಮುಖಂಡ ತೇಜಸ್ವಿ ಪಟೇಲ್ ಮಾತನಾಡಿ, ರಾಜ್ಯ ಸರ್ಕಾರ ಅನುದಾನ ನೀಡಿದರೆ ಅಚ್ಚುಕಟ್ಟು ಅಭಿವೃದ್ದಿಗೆ ಅಧ್ಯಕ್ಷರು ಹಗಲು ರಾತ್ರಿ ಶ್ರಮಿಸುತ್ತಾರೆ, ಯಾವುದೇ ಭ್ರಷ್ಟಾಚಾರ ವಿಲ್ಲದೆ ಆಡಳಿತ ನಡೆಸುತ್ತಾರೆ ಗುಣಮಟ್ಟದ ಕಾಮಗಾರಿಗೆ ಮೊದಲ ಆದ್ಯತೆ ನೀಡುತ್ತಾರೆ ಉದಾಹರಣೆಯೊಂದಿಗೆ ಹೇಳುವುದಾದರೆ 1 ರೂಪಾಯಿ ಅವರ ಕೈಗೆ ನೀಡಿದರೆ 1 ರೂಪಾಯಿ 20 ಪೈಸೆ ಕೆಲಸ ಮಾಡುವ ಚಾಕಚಕ್ಯತೆ ಅವರಲ್ಲಿದೆ ಎಂಬ ಮಾತನ್ನು ಹಂಚಿಕೊಂಡರು.

ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಸಂಶೋಧನಾ ಕೇಂದ್ರದ ಪ್ರಾಂಶುಪಾಲರಾದ ಆನಂದ್ ಕುಮಾರ್ ಮಾತನಾಡಿ, ನಿಮ್ಮ ಭಾಷಣ ಕೇಳಿದರೆ ನಿಮ್ಮ ರೈತರೊಂದಿಗಿನ ಒಡನಾಟ ಯಾವ ಮಟ್ಟದಲ್ಲಿದೆ ಎಂಬುದು ತೋರ್ಪಡಿಸುತ್ತದೆ, ಕೃಷಿಯ ಬಗ್ಗೆ ಇರುವ ಅಪಾರವಾದ ಜ್ಞಾನ ರೈತರ ಬಗೆಗಿನ ಕಾಳಜಿ ನಿಜಕ್ಕೂ ನನಗೆ ಅಚ್ಚರಿಗೆ ನೂಕಿದೆ, ನೀವು ಖಂಡಿತ ಕೃಷಿ ವಿಜ್ಞಾನಿಗಳಿಗೆ  ಸರಿಸಮನಾಗಿ ನಿಲ್ಲುತ್ತೀರಿ ನಿಮ್ಮ ಅನುಭವ ನಮ್ಮೆಲ್ಲರಿಗೂ ಮಾದರಿ ಎಂದು ಅಭಿಮಾನ ವ್ಯಕ್ತ ಪಡಿಸಿದರು ನಂತರ ವಿಶ್ವವಿದ್ಯಾಲಯ ಪ್ರಾಂಗಣದಲ್ಲಿ ಕಾಡಾ ವತಿಯಿಂದ ಅಭಿವೃದ್ದಿ ಕೆಲಸಗಳು ಅಗಬೇಕಿದ್ದು ಅನುದಾನ ನೀಡುವಂತೆ ಮನವಿ ಮಾಡಿ ಒತ್ತಾಯಿಸಿದರು.

ಗ್ರಾಮದ ರೈತರು ಮಾತನಾಡಿ, ನಮ್ಮ ಗ್ರಾಮದಲ್ಲಿ ಬಟ್ಟೆ ತೊಳೆಯಲು ಸೋಪಾನ ಕಟ್ಟೆ ವ್ಯವಸ್ಥೆ ಇಲ್ಲ ಎಂದಾಗ ನರೇಗಾ ಯೋಜನೆಯಡಿ ಅದನ್ನು ಮಾಡಲು ಅವಕಾಶವಿದ್ದು ಯೋಜನೆ ಬಳಸಿಕೊಳ್ಳುವಂತೆ ಕಿವಿ ಮಾತು ಹೇಳಿದರು ಜೊತೆಗೆ ಪ್ರತಿಯೊಬ್ಬ ರೈತರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ದೊರಕುವ ಯೋಜನೆಗಳ ಕುರಿತು ಅಧ್ಯಯನ ನಡೆಸುವಂತೆ ಸೂಚನೆ ಕೊಟ್ಟರು.

ಈ ಸಂದರ್ಭದಲ್ಲಿ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಪ್ರಾಧ್ಯಾಪಕರು, ಗ್ರಾಮಸ್ಥರು, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಧನಂಜಯ್ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: CADAChannagiriDavanagereKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚನ್ನಗಿರಿಭದ್ರಾ ಕಾಡಾ ಪ್ರಾಧಿಕಾರ
Share235Tweet123Send
Previous Post

ಪಡಿತರ ಚೀಟಿಯ ಎಲ್ಲಾ ಸದಸ್ಯರಿಗೆ ಇ-ಕೆವೈಸಿ ಕಡ್ಡಾಯ

Next Post

ಶಿವಮೊಗ್ಗ: ಉತ್ತಮ ಇಂಟರ್‌ನೆಟ್ ಸೇವೆ ಒದಗಿಸಲು ಅಗತ್ಯ ಕ್ರಮ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಶಿವಮೊಗ್ಗ: ಉತ್ತಮ ಇಂಟರ್‌ನೆಟ್ ಸೇವೆ ಒದಗಿಸಲು ಅಗತ್ಯ ಕ್ರಮ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL