ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಪುರಲೆ ಫೀಡರ್-3 ಮತ್ತು ಜಾವಳ್ಳಿ ಫೀಡರ್ -8 ರಲ್ಲಿ 11 ಕೆ.ವಿ. ಮಾರ್ಗಮುಕ್ತತೆ ನೀಡುವುದರಿಂದ ಗುರುಪುರು, ಪುರಲೆ, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 4 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಹಾಗೂ ಸಂತೇಕಡೂರು ವಿ ವಿ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಭಂಡಾರಿಕ್ಯಾಂಪ್, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನ ಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದೆ.
ಆಗಸ್ಟ್ 5 ರಂದು ವಿದ್ಯುತ್ ವ್ಯತ್ಯಯ:
ಮಲವಗೊಪ್ಪ ಫೀಡರ್-5ರಲ್ಲಿ 11 ಕೆ.ವಿ. ಮಾರ್ಗಮುಕ್ತತೆ ನೀಡುವುದರಿಂದ ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 5 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ಕಾ ಮತ್ತು ಪಾ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post