ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.

ಅಖಿಲ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹೆಚ್.ಎಸ್. ಸಚ್ಚಿದಾನಂದ ಮೂರ್ತಿ ಮತ್ತು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಸಿ. ನಟರಾಜ ಭಾಗವತ್ ಹಾಗೂ ಅನೇಕ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು ವೇದಿಕೆಯ ಮೇಲೆ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚಿನ ಅಂಕಗಳಿಸಿದ ಕು. ಸಿಂಚನ, ಕು. ಯಶಸ್ವಿನಿ, ಕು. ಇಂಚರ ಇವರುಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಹಾಗೂ ಬ್ರಾಹ್ಮಣ ಅಸಂಘಟಿತರಿಗೆ ಉಚಿತ ಕಿಟ್ಟುಗಳನ್ನು ವಿತರಿಸಲಾಯಿತು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















