ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಶಿವಮೊಗ್ಗ-ತಿರುಪತಿ-ಚೆನ್ನೈ ನೂತನ ಎಕ್ಸ್‌ಪ್ರೆಸ್ ರೈಲು ಆರಂಭಿಸುವುದು ಸೇರಿದಂತೆ ಹಲವು ರೈಲ್ವೆ ಕಾಮಗಾರಿಗಳನ್ನು ಮಂಜೂರು ಮಾಡುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಸಂಸದರು ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.
ಕೋಟೆ ಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಡಿಪೋ, ಶಿವಮೊಗ್ಗ, ಶಿಕಾರಿಪುರ, ರಾಣೆಬೆನ್ನೂರು ನೂತನ ರೈಲು ಮಾರ್ಗ, ಸಾಗರ ಜಂಬಗಾರು ರೈಲ್ವೆ ನಿಲ್ದಾಣವನ್ನು ಉನ್ನತೀಕರಿಸುವುದು. ಶಿವಮೊಗ್ಗ-ತಿರುಪತಿ ಚೆನ್ನೈ ನಡುವೆ ನೂತನ ರೈಲು ಆರಂಭ. ಬೈಂದೂರು ರೈಲ್ವೆ ನಿಲ್ದಾಣದಲ್ಲಿ ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ನಿಲುಗಡೆ ಸೇರಿದಂತೆ ಹಲವು ವಿಚಾರಗಳನ್ನು ಸಚಿವರೊಂದಿಗೆ ಚರ್ಚಿಸಿರುವ ಸಂಸದರು, ಇವುಗಳ ಮಂಜೂರಾತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post