ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಶ್ರೀವಿಜಯ ಕಲಾನಿಕೇತನ (ರಿ) ವತಿಯಿಂದ ಆಗಸ್ಟ್ 8ರ ಭಾನುವಾರದಂದು ಸಂಜೆ 6 ಗಂಟೆಗೆ ಪವಿತ್ರಾಂಗಣದಲ್ಲಿ ಶಿವಶರಣರ ವಚನ ಗಾಯನ ಕುರಿತಾದ ಉಪನ್ಯಾಸ ಕಾರ್ಯಕ್ರಮ ವಚನ – ನಿರ್ವಚನವನ್ನು ಏರ್ಪಡಿಸಲಾಗಿದೆ.
ಶಿಕ್ಷಕರು ಹಾಗೂ ಸಾಹಿತಿಗಳೂ ಆಗಿರುವ ದೀಪಾ ಕುಬಸದ್ ಅವರು ಉಪನ್ಯಾಸ ನೀಡಲಿದ್ದಾರೆ. ನೌಶಾದ್ ಹರ್ಲಾಪುರ್ ಮತ್ತು ನಿಶಾದ್ ಹರ್ಲಾಪುರ್ ವೃಂದದವರಿಂದ ವಚನ ಗಾಯನ ಕಾರ್ಯಕ್ರಮವಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಎಂ. ಎನ್. ಸುಂದರ್‌ರಾಜ್ ಅವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ಮೂಡಿಬರಲಿದ್ದು, ಶ್ರೀವಿಜಯದ ಅಧ್ಯಕ್ಷರಾದ ಡಾ. ಕೆ.ಆರ್. ಶ್ರೀಧರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಯೋಜನೆಯ ಕಾಯಕ ವರ್ಷ ಯೋಜನೆಯಡಿಯಲ್ಲಿ ಈ ಕಾರ್ಯಕ್ರಮವು ಮೂಡಿಬರಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post