ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಲ್ಲಿ ಸಿನಿಮಾ ಚಿತ್ರೀಕರಣದ ವೇಳೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿದವರ ಹಾಗೂ ತೂರಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಅವಘಡಗಳು ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದು ನಿಜಕ್ಕೂ ದುಃಖಕರ ವಿಚಾರ. ರಾಜ್ಯದಲ್ಲಿ ಸಿನಿಮಾ ಚಿತ್ರೀಕರಣಕ್ಕಾಗಿ ನೀತಿ-ನಿಯಮಗಳಿದ್ದರೂ ಕೆಲವರು ಅನುಸರಿಸುವುತ್ತಿಲ್ಲ, ಇದರಿಂದ ಅವಘಡಗಳು ಸಂಭವಿಸುತ್ತವೆ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ ಎಂದರು.
ಈಗಾಗಲೇ ಇರುವ ನಿಯಮಗಳಂತೆ ಇನ್ನಷ್ಟು ಸ್ಪಷ್ಟೀಕರಣದ ಜೊತೆಗೆ ಸಾಹಸ ಚಿತ್ರೀಕರಣಕ್ಕೆ ಸರ್ಕಾರದಿಂದ ಅನುಮತಿಯನ್ನು ಪಡೆಯಬೇಕು. ಅದರ ಜೊತೆ ಅನುಮತಿಯಿಲ್ಲದೆ ಚಿತ್ರೀಕರಣ ಮಾಡುವಂತಿಲ್ಲ ಎಂಬ ಕಠಿಣ ನಿಯಮವನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post