ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೆನರಾ ಬ್ಯಾಂಕ್’ನಲ್ಲಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ನಗರದ ಇ. ಅಶ್ವಾಥಿ ಅವರು ಆಂಧ್ರಪ್ರದೇಶದ ಆಚಾರ್ಯ ಎನ್.ಜಿ. ರಂಗ ಕೃಷಿ ವಿಶ್ವವಿದ್ಯಾಲಯದಲ್ಲಿ ಎಂಎಸ್’ಸಿ(ಕೃಷಿ) ಅಂತಿಮ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ನಗರದ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯಲ್ಲಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಸ್.ಎಂ. ವರದರಾಜ್ ಅವರ ಪತ್ನಿಯಾದ ಅಶ್ವಾಥಿ ಅವರೂ ಸಹ ಇದೇ ಬ್ಯಾಂಕ್’ನ ನೆಹರೂ ರಸ್ತೆಯ ಶಾಖೆಯಲ್ಲಿ ಅಗ್ರಿಕಲ್ಚರ್ ಫೀಲ್ಡ್ ಆಫೀಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅಶ್ವಾಥಿ ಅವರು, ಎಂಎಸ್’ಸಿ(ಕೃಷಿ)CGP ಪದವಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ತಿರುಪತಿಯಲ್ಲಿ ನಿನ್ನೆ ನಡೆದ ೫೦ನೆಯ ಘಟಿಕೋತ್ಸವದಲ್ಲಿ ಅಶ್ವಾಥಿ ಅವರಿಗೆ ಆಂಧ್ರಪ್ರದೇಶದ ರಾಜ್ಯಪಾಲ ಬಿಸ್ವಭೂಷಣ ಹರಿಚಂದನ್ ಹಾಗೂ ವಿವಿ ಕುಲಸಚಿವ ಡಾ.ಎ. ವಿಷ್ಣುವರ್ಧನ್ ರೆಡ್ಡಿ ಅವರುಗಳು ಚಿನ್ನದ ಪದಕ ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post