ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಯುವಜನಾಂಗಕ್ಕೆ ನೇರ ಮತ್ತು ಪರೋಕ್ಷವಾಗಿ ಉದ್ಯೋಗಾವಕಾಶಗಳನ್ನು ಒದಗಿಸುವ ಹಾಗೂ ಪ್ರವಾಸೋದ್ಯಮವನ್ನು ಬೆಂಬಲಿಸುವ ದೃಷ್ಟಿಯಿಂದ ಶಿವಮೊಗ್ಗ ಸಮೀಪದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮವನ್ನು ಅಭಿವೃದ್ಧಿಪಡಿಸಲು ಅಗತ್ಯ ಆರ್ಥಿಕ ನೆರವನ್ನು ನೀಡುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಅರಣ್ಯ, ಪರಿಸರ ಹಾಗೂ ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮನವಿ ಸಲ್ಲಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಅವರು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಜಿಲ್ಲೆಯ ಪ್ರವಾಸೋದ್ಯಮ ಉತ್ತೇಜನಕ್ಕೆ ಇರಬಹುದಾದ ಅವಕಾಶಗಳು, ಶಿವಮೊಗ್ಗ-ಬೈಂದೂರು ನಡುವಿನ ಅರಣ್ಯ ಪ್ರದೇಶದಲ್ಲಿ ತುರ್ತಾಗಿ ಆಗಬೇಕಾದ ಆಯ್ದ ಕಾಮಗಾರಿಗಳು ಹಾಗೂ ಅಭಿವೃಧ್ಧಿಪಡಿಸಬೇಕಾದ ಉದ್ಯಾನವನಗಳು ಹಾಗೂ ಅರಣ್ಯ ಪ್ರದೇಶಗಳ ರಕ್ಷಣೆ ಕುರಿತು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.
ಕೇಂದ್ರ ಮೃಗಾಲಯ ಪ್ರಾಧಿಕಾರವು ಹುಲಿ-ಸಿಂಹಧಾಮ ಸಫಾರಿಯ ಮಾಸ್ಟರ್ ಪ್ಲಾನ್‌ನ್ನು ಅನುಮೋದಿಸಿದೆ. ಈ ಕ್ರಿಯಾಯೋಜನೆಯ ಅನುಷ್ಠಾನಕ್ಕಾಗಿ ಅಗತ್ಯವಾಗಿರುವ ಅನುದಾನದಲ್ಲಿ ರಾಜ್ಯ ಸರ್ಕಾರವು ತನ್ನ ಪಾಲಿನ ಶೇ.40ರಷ್ಟು ಅಂದರೆ 500.00ಲಕ್ಷ ರೂ.ಗಳನ್ನು ಬಿಡುಗಡೆಗೊಳಿಸಿದೆ. ಉಳಿದಂತೆ ಕೇಂದ್ರ ಮೃಗಾಲಯ ಪ್ರಾಧಿಕಾರವು ಕಳೆದ ಅಕ್ಟೋಬರ್‌ರಿಂದ ಬಾಕಿ ಉಳಿಸಿಕೊಂಡಿರುವ ಅನುಪಾತದ 750.00ಲಕ್ಷ ರೂ.ಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವರಲ್ಲಿ ಮಾಡಿಕೊಳ್ಳಲಾಗಿದ್ದು, ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು ತಿಳಿಸಿದ್ದಾರೆ.
ಪ್ರಸ್ತುತ ತ್ಯಾವರೆಕೊಪ್ಪ ಮೃಗಾಲಯಕ್ಕೆ ಸುಮಾರು 2.77ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದು, 266.00ಲಕ್ಷ ರೂ.ಗಳ ಆದಾಯ ಸಂಗ್ರಹವಾಗಿ ಪ್ರವಾಸಿಗರ ಆಕರ್ಷಣೀಯ ಕೇಂದ್ರವಾಗಿದೆ ಎಂದವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post