ಕಲ್ಪ ಮೀಡಿಯಾ ಹೌಸ್
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಕೋವಿಡ್-19 ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೊವಾಕ್ಸಿನ್ ಎರಡನೇ ಡೋಸ್ ಲಸಿಕೆ ನೀಡಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈಗಾಗಲೇ ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರದಲ್ಲಿ ಹೆಸರು ನೊಂದಣಿ ಮಾಡಿಸಿದ್ದ ವಿವಿಧ ವಿಭಾಗಗಳ ಸುಮಾರು 200 ವಿದ್ಯಾರ್ಥಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಯಿತು.
ವಿಶ್ವವಿದ್ಯಾಲಯದ ಆರೋಗ್ಯಾಧಿಕಾರಿ ಡಾ. ರಕ್ಷಾ, ಮಹಿಳಾ ವೈದ್ಯಾಧಿಕಾರಿ ಡಾ. ಉಷಾರಾಣಿ, ಬಿಆರ್ಪಿ ಸರ್ಕಾರಿ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ. ಹಂಸವೇಣಿ, ಫಣಿರಾಜ್, ರಿಯಾಜ್ ಅಹಮದ್, ಕಲಾವತಿ, ಪುಷ್ಪಕಲಾ, ಸುಬ್ರಮಣ್ಯ, ಪ್ರಕಾಶ್ ಮತ್ತಿತರು ಈ ಸಂದರ್ಭದಲ್ಲಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post