ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ನಗರದಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಬೈಕ್ ಸವಾರರು ಹಾಗೂ ಸಾರ್ವಜನಿಕರಿಗೆ ದಂಡ ವಿಧಿಸುವ ಮೂಲಕ ಚಳ್ಳಕೆರೆ ಪೊಲೀಸರು ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಚಳ್ಳಕೆರೆ ಪಿಎಸ್’ಐ ಮಹೇಶ ಗೌಡ ಹಾಗೂ ತಹಶೀಲ್ದರ್ ಎನ್. ರಘುಮೂರ್ತಿ ಹಾಗೂ ಪೋಲಿಸ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.
ಅಂಬೇಡ್ಕರ್ ವೃತ್ತದಲ್ಲಿ ಬೆಳಗ್ಗೆ ಮಾಸ್ಕ್ ಧರಿಸದೇ ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು, ಕಾರು-ಆಟೋ ಹಾಗೂ ಗೂಡ್ಸ್ ವಾಹನದಲ್ಲಿ ಸಂಚರಿಸುವವರಿಗೆ ನೂರು ರೂಪಾಯಿಗಳ ದಂಡ ವಿಧಿಸಿ ಎಚ್ಚರಿಕೆ ಮೂಡಿಸಿದ್ದಾರೆ.
ಇದೇ ಸಮಯದಲ್ಲಿ ತಹಶೀಲ್ದಾರ್ ಎನ್. ರಘುಮೂರ್ತಿ ಅವರು ಸಹ ಪೊಲೀಸ್ ಇಲಾಖೆ ಜೊತೆಗೂಡಿ ಮಾಸ್ಕ್ ಅಭಿಯಾನದಲ್ಲಿ ಪಾಲ್ಗೊಂಡಿದ್ದು, ನಗರದಲ್ಲಿ ಸಂಚರಿಸುತ್ತಿದ್ದ ಬಸ್ಸುಗಳು ಇತರೆ ವಾಹನಗಳ ಮಾಸ್ಕ್ ಹಾಕದೆ ಇದ್ದವರಿಗೆ ದಂಡದ ಬಿಸಿ ತೋರಿಸಿದ್ದಾರೆ.
ಪೋಲಿಸ್ ಸಿಬ್ಬಂದಿಗಳಾದ ಕುಮಾರಸ್ವಾಮಿ, ವೆಂಕಟೇಶ್, ರಸೂಲ್ ಸಾಬ್, ರಮೇಶ್ ಬಾರ್ಕಿ, ತುಬಸುಮ್ ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post