ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಹಾರ, ತುರಾಯಿ, ಹಣ್ಣಿನ ಬುಟ್ಟಿಗಳನ್ನು ನೀಡದಂತೆ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈಗ ಅಂತಹುದ್ದೇ ಒಂದು ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ ತಾವು ಸಂಚರಿಸುವ ರಸ್ತೆಗಳಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ. ಬದಲಾಗಿ ಸಾಮಾನ್ಯ ಜನರಂತೆ ಸಂಚರಿಸುತ್ತೇನೆ ಎಂದು ಪೊಲೀಸ್ ಇಲಾಖೆಗೆ ಮಹತ್ವದ ಸೂಚನೆ ನೀಡಿದ್ದಾರೆ.
ತಾವು ಮನೆಯಿಂದ ಹೊರಡುವಾಗ ಇಲ್ಲವೇ ಅಧಿಕೃತ ಕಾರ್ಯಕ್ರಮಕ್ಕೆ ಬರುವ ಸಂದರ್ಭದಲ್ಲಿ ಭದ್ರತೆಗಾಗಿ ತಾವು ಸಂಚರಿಸುವ ರಸ್ತೆಗಳಲ್ಲಿ ಝೀರೋ ಟ್ರಾಫಿಕ್ ಮಾಡುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ, ಇನ್ನು ಮುಂದೆ ಇಂತಹ ವ್ಯವಸ್ಥೆ ತಮಗೆ ಮಾಡುವುದು ಬೇಡ ಎಂದು ಸೂಚನೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post