ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನ ಮತ್ತು ಹತಾತ್ಮ ದಿನವನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಬೇಕೆಂದು ಆದೇಶಿಸಿರುವ ಹಿನ್ನೆಲೆ ಕೆ. ರಂಗನಾಥ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಅಭಿನಂದಿಸಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಸ್ವತಂತ್ರ ಸೇನಾನಿ, ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮದಿನವನ್ನು ಆಗಸ್ಟ್ 15ರ ಸ್ವಾತಂತ್ರ್ಯ ದಿನೋತ್ಸವದಂದು ಸಂಗೊಳ್ಳಿ ರಾಯಣ್ಣ ಜಯಂತಿ ಎಂದು ಹಾಗೂ ಜನವರಿ 26ರಂದು ಗಣರಾಜ್ಯೋತ್ಸವದಂದು ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆಯಾಗಿ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಆಚರಿಸಬೇಕೆಂದು ಆದೇಶಿಸಿದ್ದಾರೆ.
ಇಂದು ಸಚಿವ ಸಂಪುಟದ ಮಹತ್ವ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರ ಈ ತೀರ್ಮಾನ ರಾಯಣ್ಣನ ಅಭಿಮಾನಿಗಳಲ್ಲಿ ಅತ್ಯಂತ ಸಂತೋಷ ತಂದಿದೆ ಆದೇಶ ಮಾಡಿದ ಸರ್ಕಾರದ ಮುಖ್ಯಮಂತ್ರಿಗಳಿಗೂ ಹಾಗೂ ಎಲ್ಲಾ ಸಚಿವರಿಗೂ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕರಾದ ಕೆ. ರಂಗನಾಥ್ ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post