ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕಾರುಣ್ಯ ಚಾರಿಟಬಲ್ ಟ್ರಸ್ಟ್‌ನಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಟ್ರಸ್ಟ್‌ನ ಸಲಹಾ ಮಂಡಳಿ ಸದಸ್ಯ ಡಾ. ಹೆಚ್.ಆರ್. ನರೇಂದ್ರ ಧ್ವಜಾರೋಹಣ ನೆರವೇರಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಬಹು ನಿರೀಕ್ಷಿತ ಸಂಸ್ಥೆಯ ಉದ್ದೇಶಗಳನ್ನು ಒಂದೇ ಫ್ರೇಮ್‌ನಲ್ಲಿ ತೋರಿಸುವಂತಹ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು. ಹಾಗೂ ಇದೇ ವೇಳೆ ಕಾರುಣ್ಯ ಚಾರಿಟಬಲ್ ಟ್ರಸ್ಟ್‌ನ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಈ-ಮೇಲ್ ಐಡಿಯನ್ನು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ರವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಸ್ಥೆಯು ಅತಿ ಎತ್ತರಕ್ಕೆ ಬೆಳೆಯಲಿ, ನಿರಾಶ್ರಿತರಿಗೆ ಆಶ್ರಯ ನೀಡುವಂತಹ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.
ಮ್ಯಾನ್ ಖೈಂಡ್ ಸಂಸ್ಥೆಯನ್ನು ಸ್ಥಾಪಿಸಿ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಶಿವಮೊಗ್ಗದ ರಾಜು ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಕಾರುಣ್ಯ ಚಾರಿಟಬಲ್ ಟ್ರಸ್ಟ್‌ನ ರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, 75ನೇ ಸ್ವಾತಂತ್ರ್ಯೋತ್ಸವದ ಶುಭ ಸಂದೇಶ ನೀಡಿದರು. ಕಾರ್ಯದರ್ಶಿ ಕಾಂತಾ ದಿನೇಶ್ ಪ್ರಸ್ತಾಪಿಸಿದರು. ಟ್ರಸ್ಟ್ ನ ಖಜಾಂಚಿ ಎನ್. ನಾಗವೇಣಿ ಸ್ವಾಗತಿಸಿ, ನಿರ್ದೇಶಕ ಅಂತೋಣಿ ನಿರೂಪಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್‌ನ ಪದಾಧಿಕಾರಿಗಳಾದ ಕೆ. ನಾಗರಾಜ್, ಹಿರಿಯೂರು ಬಾಸ್ಕರ್, ಜಿ. ಸುರೇಶ್ ಕುಮಾರ್, ಶಿವಮೊಗ್ಗ ಮಂಜುಳಾ, ಯಶೋದಮ್ಮ, ವಿ. ಮಂಜುಳಾ, ಪವುಲಯ್ಯ, ತಂಜಮ್ಮ, ಕಾರೇಹಳ್ಳಿ ಚಂದ್ರಾನಾಯ್ಕ್, ಅಶ್ವಥ್ ನಗರ ಮಂಜುಳಾ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post