ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ಆಗಸ್ಟ್ 30 ರಂದು ಶ್ರೀ ಕೃಷ್ಣ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲು ಇಲ್ಲಿನ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ ವಿದ್ಯಾ ನಿಲಯದಲ್ಲಿ ತಾಲ್ಲೂಕು ಯಾದವ ಸಂಘದಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಯಾದವ ಸಂಘದ ಅಧ್ಯಕ್ಷ ರವಿಕುಮಾರ್ ಮಾತನಾಡಿ, ಕೊರೋನಾದ 3ನೇ ಅಲೆಯು ಅಪಾಯಕಾರಿಯಾಗಿರುವುದರಿಂದ ಈ ಬಾರಿಯು ಶ್ರೀ ಕೃಷ್ಣ ಜಯಂತಿ ಸರಳವಾಗಿ ಇಲ್ಲಿನ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಆಚರಣೆ ಮಾಡಲಾಗುವುದು ಎಂದು ಹೇಳಿದರು.
ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಟಿ. ರಘುಮೂರ್ತಿ, ತಹಶೀಲ್ದಾರ್ ಎನ್. ರಘುಮೂರ್ತಿ, ಸಮಾಜದ ಮುಖಂಡರನ್ನು ಸೇರಿದಂತೆ ಇತರೆ ಜನಪ್ರತಿನಿಧಿಗಳನ್ನು ಆಹ್ವಾನಿಸಿ, ಕೋವಿಡ್ ನಿಯಮಗಳು ಪಾಲಿಸಿಕೊಂಡು ಸರಳವಾಗಿ ಶ್ರೀ ಕೃಷ್ಣ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಈ ವೇಳೆ ತಾಲ್ಲೂಕು ಯಾದವ ಸಂಘದ ಕಾರ್ಯದರ್ಶಿ ಶಿವಣ್ಣ, ಮಹಿಳಾ ಸಂಘದ ಅಧ್ಯಕ್ಷೆ ಭಾನುಮತಿ, ಸಮಾಜದ ಮುಖಂಡರಾದ ಹನುಮಂತಪ್ಪ, ಮೂಡಲಗಿರಿಯಪ್ಪ, ಹಟ್ಟಿರುದ್ರಪ್ಪ, ರಂಗಸ್ವಾಮಿ ಸೇರಿದಂತೆ ಮುಂತಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post