ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ಕೊರೋನಾ ಮೂರನೇ ಅಲೆ ಕುರಿತು ಎಲ್ಲರೂ ಎಚ್ಚರಿಕೆಯಿಂದ ಜಾಗೃತಿ ವಹಿಸಿ, ಕೊರೋನಾ ಲಸಿಕೆ ನೀಡುವ ಕಾರ್ಯ ಚುರುಕುಗೊಳಿಸಬೇಕು ಎಂದು ಶಾಸಕ ಟಿ. ರಘುಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋವಿಡ್ ಲಸಿಕೆ ತಾಲೂಕಿನಲ್ಲಿ ಮಂದಗತಿಯಲ್ಲಿ ನಡೆಯುತ್ತಿರುವ ಹಿನ್ನೆಲೆಯಿಂದ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಗ್ರಾಮೀಣ ಭಾಗಗಳಲ್ಲಿ ಅನಕ್ಷರಸ್ಥರು, ವೃದ್ಧರು ಕೊರೋನಾ ಲಸಿಕೆ ಪಡೆಯಲು ಭಯಪಟ್ಟು, ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ತಾಲೂಕಿನಲ್ಲಿ ಕೊರೋನಾ ಲಸಿಕೆ ವಿತರಣೆಯಲ್ಲಿ ಪ್ರಗತಿಯಾಗಿಲ್ಲ. ಅಧಿಕಾರಿಗಳು ಈಬಗ್ಗ ಜಾಗೃತಿ ಮೂಡಿಸಿ ಎಲ್ಲರಿಗೂ ಲಸಿಕೆ ಹಾಕಿಸಬೇಕು ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ಲಸಿಕೆ ಕುರಿತು ಕೆಲವೊಂದು ಸುಳ್ಳು ಸುದ್ದಿ ಹರಡುತ್ತಿದ್ದು, ಅನಕ್ಷರಸ್ಥರು, ಕೊರೋನಾ ಲಸಿಕೆ ಪಡೆದರೆ ತೊಂದರೆಯಾಗುತ್ತದೆ ಎಂಬ ತಪ್ಪು ಕಲ್ಪನೆಯಿಂದ ಲಸಿಕೆ ಪಡೆಯಲು ಮುಂದಾಗುತ್ತಿಲ್ಲ. ಆರೋಗ್ಯ ಅಧಿಕಾರಿಗಳು ಕೊರೋನಾ ಲಸಿಕೆಯಿಂದ ಯಾವುದೇ ಅಪಾಯವಾಗುವುದಿಲ್ಲ ಎಂದು ಜಾಗೃತಿ ಮೂಡಿಸಿ ಲಸಿಕೆ ಹಾಕಿಸಬೇಕು ಎಂದರು.
ಲಸಿಕೆ ಹಾಕಿಸಿಕೊಳ್ಳುವುದರಿಂದ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ. ಭಯ ಪಡದೆ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಸಾರ್ವಜನಕರಿಗೆ ಮನವಿ ಮಾಡಿದರು.
ತಹಶೀಲ್ದಾರ್ ಎನ್. ರಘುಮೂರ್ತಿ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರ ಮನಸ್ಸು ಪರಿವರ್ತನೆ ಮಾಡಿ ಕೊರೋನಾ ಲಸಿಕೆ ಕೊಡಿಸಿ, ಅಧಿಕಾರಿಗಳ ಸಹಕಾರ ಸಂಪೂರ್ಣವಾಗಬೇಕು. ಎರಡನೇ ಅಲೆಯಲ್ಲಿ ಅತ್ಯಂತ ಕಠಿಣ ಪರಿಸ್ಥಿತಿ ಎದುರಿಸಿದ್ದೇವೆ. ಆದ್ದರಿಂದ ಈಗ ಮೂರನೇ ಅಲೆ ತಡೆಯಲು ತಾಲೂಕು ಮಟ್ಟದ ಅಧಿಕಾರಿಗಳು ಸ್ಪಂದಿಸಿ ಎಂದು ಮನವಿ ಮಾಡಿಕೊಂಡರು.
ಈ ಸಮಯದಲ್ಲಿ ನಗರಸಭೆ ಅಧಕ್ಷೆ ಜಯಲಕ್ಷ್ಮಿ ಕೃಷ್ಣಮೂರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗೌಡ, ನಗರಸಭಾ ಸದಸ್ಯ ಮಲ್ಲಿಕಾರ್ಜುನ್, ತಾಲ್ಲೂಕು ಆರೋಗ್ಯಾಧಿಕಾರಿ ಪ್ರೇಮಸುಧಾ, ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿ ಮೋಜನಕುಮಾರಿ, ಪೌರಾಯುಕ್ತ ಪಾಲಯ್ಯ ಮತ್ತು ಅಂಗನವಾಡಿ ಕಾರ್ಯಕರ್ತರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post