ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ಮೊದಲ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಸೆ.2ರಂದು ನಗರಸಭೆ ವಾರ್ಡ್ ನಂ.31ರ ಜಿಂಕ್‌ಲೈನ್ ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ವಾರ್ಡ್ ನಗರಸಭಾ ಸದಸ್ಯ ಪಲ್ಲವಿ ಎಸ್ ದಿಲೀಪ್ ನೇತೃತ್ವದಲ್ಲಿ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗು ತಾಲೂಕು ಸರ್ಕಾರಿ ಆಸ್ಪತ್ರೆ ಸಹಕಾರದೊಂದಿಗೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಶಿಬಿರ ಆಯೋಜಿಸಲಾಗಿದೆ.
ಚರ್ಮ ವೈದ್ಯರು, ದಂತ ತಜ್ಞರು, ಸರ್ಜನ್, ಕಿವಿ, ಮೂಗು, ಗಂಟಲು, ಮಕ್ಕಳ ತಜ್ಞರು ಮತ್ತು ಕಣ್ಣಿನ ತಜ್ಞರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದು, ಆರೋಗ್ಯ ತಪಾಸಣೆ ಜೊತೆಗೆ ಉಚಿತವಾಗಿ ಇಸಿಜಿ, ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ ಸಹ ನಡೆಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post