ಕಲ್ಪ ಮೀಡಿಯಾ ಹೌಸ್
ಮುಂಬೈ: ಬಾಲಿವುಡ್ ಸಿನಿಮಾ ನಟ, ಹಿಂದಿ ಬಿಗ್‌ಬಾಸ್ ಸೀಸನ್ ೧೩ರ ವಿಜೇತ ಸಿದ್ಧಾರ್ಥ್ ಶುಕ್ಲಾ ತೀವ್ರ ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ನಟ ಸಿದ್ಧಾರ್ಥ್ ಶುಕ್ಲಾಗೆ ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ಮುಂಬೈನ ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕಿರುತೆರೆ ಹಾಗೂ ಸಿನಿಮಾಗಳಲ್ಲಿ ನಟಿಸುತ್ತಿದ್ದ ಸಿದ್ದಾರ್ಥ್, ಬಾಲಿಕಾ ವಧು ಧಾರಾವಾಹಿ ಮೂಲಕ ಲಕ್ಷಾಂತರ ಜನರ ಮನ ಗೆದ್ದಿದ್ದರು. ತೀವ್ರ ಹೃದಯಾಘಾತದಿಂದ ಸಿದ್ಧಾರ್ಥ್ ಇಂದು ಬೆಳಗ್ಗೆ ನಿಧನರಾಗಿರುವುದಾಗಿ ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post