ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ ಇವರು ಸೆ.4 ಮತ್ತು 5 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸೆ.4 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರ್ರಿ 7:30 ಕ್ಕೆ ಶಿವಮೊಗ್ಗ ಆಗಮಿಸಿ, ಸರ್ಕ್ಯೂಟ್ ಹೌಸ್ನಲ್ಲಿ ವಾಸ್ತವ್ಯ ಮಾಡುವರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಸೆ.5 ರ ಬೆಳಿಗ್ಗೆ 9 ರಿಂದ 10 ಗಂಟೆವರೆಗೆ ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶಂಕುಸ್ಥಾಪನೆ, ನಗರದ ವಿದ್ಯಾನಗರದ ವೃತ್ತಾಕಾರದ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ, ರಾಷ್ಟ್ರೀಯ ಹೆದ್ದಾರಿ ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ತುಂಗಾ ನದಿಗೆ ಹಾಲಿ ಇರುವ ಸೇತುವೆ ಪಕ್ಕದಲ್ಲಿ ಮತ್ತೊಂದು ಸೇತುವೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಶ್ರೀ ಅರಕೇಶ್ವರ ದೇವಸ್ಥಾನ ಆವರಣ, ಹೊಳೆಹೊನ್ನೂರು ರಸ್ತೆಯ ರೈಲ್ವೇಗೇಟ್ ಬಳಿ, ವಿದ್ಯಾನಗರ ಇಲ್ಲಿ ನೆರವೇರಿಸುವರು.
ಬೆಳಿಗ್ಗೆ 10:15 ಕ್ಕೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 10:45 ರಿಂದ 11:30 ರವರೆಗೆ ಲೋಕೋಪಯೋಗಿ ಕಚೇರಿಯಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಮಧ್ಯಾಹ್ನ 12 ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಸ್ಥಳ ಪರಿಶೀಲನೆ ಮಾಡುವರು. ಮಧ್ಯಾಹ್ನ 12.30 ಕ್ಕೆ ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post