ಕಲ್ಪ ಮೀಡಿಯಾ ಹೌಸ್
ಬೀದರ್: ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಗ್ರಾಮೀಣ ಭಾಗದ ರಸ್ತೆಗಳನ್ನು ಕೂಡಲೇ ದುರಸ್ತಿ ಮಾಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಅಧಿಕಾರಿಗಳಿಗೆ ಸೂಚಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಮುತ್ತಂಗಿ ಗ್ರಾಮದ ಗ್ರಾಮ ಪಂಚಾಯತಿ ಕಛೇರಿ ಆವರಣದಲ್ಲಿ ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಭೆ ನಡೆಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿನ ರೈತರ ಜಮೀನುಗಳಿಗೆ ತೆರಳುವ ರಸ್ತೆಗಳು ಸಂಪೂರ್ಣವಾಗಿ ಹಾಳಾಗುತ್ತಿವೆ. ರೈತರು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಕ?ವಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಅಂತಹ ರಸ್ತೆಗಳನ್ನು ಗುರುತಿಸಿ ದುರಸ್ತಿ ಮಾಡುವ ಕೆಲಸ ಮಾಡಬೇಕು ಎಂದರು.


ಕೃಷಿ ಪಂಪ್ ಸೆಟ್ ಗಳಿಗೆ ಸಂಬಂಧಿಸಿದ ಟ್ರಾನ್ಸಫಾರ್ಮರ್ (ಟಿಸಿ)ಗಳು ದುರಸ್ತಿ (ಸುಟ್ಟಾಗ)ಗೆ ಬಂದಾಗ ಅವುಗಳನ್ನು ಆದಷ್ಟು ಬೇಗ ಸರಿ ಪಡಿಸಿಕೊಡುವ ಕೆಲಸವನ್ನು ಕೆಇಬಿ ಅಧಿಕಾರಿಗಳು ಮಾಡಬೇಕು. ದುರಸ್ತಿಗೆ ಬಂದ 24 ಗಂಟೆಗಳ ಒಳಗೆ ಅವುಗಳನ್ನು ಸರಿ ಪಡಿಸಿ ಕಳುಹಿಸಬೇಕೆಂದು ಸರ್ಕಾರವೆ ಹೇಳುತ್ತಿದೆ. ಆದರೇ ಗ್ರಾಮೀಣ ಭಾಗದಲ್ಲಿ ಈ ನಿಯಮಗಳು ಪಾಲನೆ ಆಗುತ್ತಿಲ್ಲ. ಆ ಬಗ್ಗೆ ಕೆಇಬಿ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು. ದುರಸ್ತಿ ಕೇಂದ್ರವನ್ನು ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡುವುದಾದರೆ ಶಾಸಕರ ಅನುದಾನವನ್ನು ನಾನು ನೀಡುತ್ತೇನೆ ಎಂದು ಹೇಳಿದರು.


ರಸ್ತೆ ಅಭಿವೃದ್ಧಿ ಕೆಲಸ ಆರಂಭಿಸಿದ ಬಳಿಕ ಅವುಗಳನ್ನು ಸಂಪೂರ್ಣವಾಗಿ ಮಾಡಬೇಕು. ಅರ್ಧಕ್ಕೆ ಬಿಟ್ಟು ಬರಬಾರದು. ಗ್ರಾಮೀಣ ಭಾಗಕ್ಕೆ ಬಸ್ ವ್ಯವಸ್ಥೆ ಮಾಡಿಸುವ ಸಂಬಂಧ ನಾನು ಡಿಸಿಯವರೊಂದಿಗೆ ಮಾತನಾಡುತ್ತೇನೆ. ಬಸ್ ವ್ಯವಸ್ಥೆ ಕಲ್ಪಿಸಿಕೊಡುವ ಕೆಲಸ ಮಾಡುತ್ತೇನೆ. ರೈತರ ಜಮೀನುಗಳಲ್ಲಿನ ಬೆಳೆಗಳನ್ನು ಕಾಡುಪ್ರಾಣಿಗಳು ನಾಶ ಮಾಡುತ್ತಿದ್ದು, ಆ ಬಗ್ಗೆ ಅರಣ್ಯ ಇಲಾಖೆಯವರು ಕ್ರಮಕೈಗೊಳ್ಳಬೇಕು. ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ನೀಡುವ ವಿಚಾರವಾಗಿ ಅಧಿವೇಶನದಲ್ಲಿ ಮಾತನಾಡುತ್ತೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದರು.


ಈ ಸಂದರ್ಭದಲ್ಲಿ ಚಿಟಗುಪ್ಪಾ ತಾಲೂಕು ಪಂಚಾಯತಿ ಇಒ ಶಂಕರ ಕನಕ, ಚಿಟಗುಪ್ಪಾ ತಹಶಿಲ್ದಾರ ಮಹಮ್ಮದ್ ಝೀಯಾವುದೀನ್, ಲ್ಯಾಂಡ್ ಆರ್ಮಿ ಡಿಡಿ ರಘುನಾಥ್, ಪಿಡಬ್ಲೂಡಿ ಇಇ ಶಶಿಧರ್ ಪಾಟೀಲ್, ಪಿಆರ್‌ಒ ಎಇಇ ವಾಮನ್ ರಾವ್ ಜಾದಾವ್, ಮುಖಂಡರಾದ ಸಂತೋಷ್ ರಾಸೂರು, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















