ಕಲ್ಪ ಮೀಡಿಯಾ ಹೌಸ್
ಸೊರಬ: ಹರಿಹರದ ಶ್ರೀ ಮಹಾತಪಸ್ವಿ ಸೇವಾ ಪ್ರತಿಷ್ಠಾನ ವತಿಯಿಂದ ತಾಲೂಕಿನ ಶಿಗ್ಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಕೊರೋನಾ ವಾರಿಯರ್ಸ್‌ಗೆ ಗೌರವ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಎಚ್. ವೀಣಾ ಅವರಿಗೆ ಜೀವ ರಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಗ್ರಾಮ ಲೆಕ್ಕಾಧಿಕಾರಿ ವಿನಯ್ ಎಸ್. ಹಿರೇಮಠ್ ಕೊಡಕಣಿ ಮಾತನಾಡಿ, ಕೊರೋನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸಿದ ಆರೋಗ್ಯ ಇಲಾಖೆಯ ಸಿಬ್ಬಂದಿ ಸೇವೆ ಅತ್ಯಂತ ಪ್ರಶಂಸನಾರ್ಹ. ಕೊರೋನಾ ಹರಡುವಿಕೆ ತಡೆಗಟ್ಟಲು ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸಿದ್ದಾರೆ. ಆದರೆ, ಸೋಂಕಿತರನ್ನು ಹತ್ತಿರದಿಂದ ಉಪಚರಿಸಿದವರು ಆರೋಗ್ಯ ಇಲಾಖೆಯವರು. ಈ ನಿಟ್ಟಿನಲ್ಲಿ ಟ್ರಸ್ಟ್‌ನ ವತಿಯಿಂದ ಆರೋಗ್ಯ ಇಲಾಖೆಯವರನ್ನು ಗುರುತಿಸಿ ಗೌರವಿಸುತ್ತಿರುವುದು ಸ್ವಾಗತಾರ್ಹ ವಿಷಯ ಎಂದರು.
ಟ್ರಸ್ಟ್‌ನ ಉಪಾಧ್ಯಕ್ಷ ಆರ್. ವೀರೇಂದ್ರ, ಗ್ರಾಮ ಸಹಾಯಕ ವೀರೇಶ್ ಹಿರೇಕಸವಿ. ವೇದಮೂರ್ತಿ ಶಿಗ್ಗಾ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಶಕುಂತಲಾ ಸೇರಿದಂತೆ ಸಹಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಇದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post